ಬೀದರ್: ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ನಡೆದ ವಚನ ಜಾತ್ರೆಯಲ್ಲಿ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದ ಸೇವೆಗಾಗಿ ಬ್ರಿಮ್ಸ್ ಆಸ್ಪತ್ರೆಯ ವಿದ್ಯುತ್ ತಂತ್ರಜ್ಞ ದಿಲೀಪಕುಮಾರ ಡೊಂಗರಗೆ ಅವರನ್ನು ಸನ್ಮಾನಿಸಲಾಯಿತು.
ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಶಾಲು ಹೊದಿಸಿ, ಸನ್ಮಾನ ಪತ್ರ ನೀಡಿ ಗೌರವಿಸಿದರು. ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ, ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಹಾಗೂ ಇತರರು ಇದ್ದರು.