ಬೀದರ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಬೇಕು ಎಂದು ಕಾಂಗ್ರೆಸ್ ಎಸ್.ಟಿ. ವಿಭಾಗದ ರಾಜ್ಯ ಘಟಕದ ಕಾರ್ಯದರ್ಶಿ ರಾಜಕುಮಾರ ಕಂದಗೂಳೆ ಒತ್ತಾಯಿಸಿದ್ದಾರೆ.
ಈಶ್ವರ ಖಂಡ್ರೆ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷದ ಸಂಘಟನೆ ಬಲವರ್ಧನೆಗೆ ಶ್ರಮಿಸಿದ್ದಾರೆ. ಪಕ್ಷ ವಹಿಸಿದ ವಿವಿಧ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಾಲ್ಕು ಬಾರಿ ಶಾಸಕ, ಎರಡನೇ ಬಾರಿಗೆ ಸಚಿವರಾಗಿರುವ ಅವರು, ವಿವಿಧ ಚುನಾವಣೆಗಳಲ್ಲಿ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪಕ್ಷದ ಹಿರಿಯ ಹಾಗೂ ಕಿರಿಯರ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಸ್ವಭಾವ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಲ್ಲ ರೀತಿಯಿಂದಲೂ ಅರ್ಹರಾಗಿದ್ದಾರೆ. ಹೀಗಾಗಿ ವರಿಷ್ಠರು ಅವರಿಗೆ ಕೆಪಿಸಿಸಿಯ ಹೊಣೆ ವಹಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.