ಜಿಲ್ಲೆ

ಬೀದರ್ ನಲ್ಲಿ ಕೆಡಿಪಿ ಸಭೆ 18ರಂದು

ರೇವಣಸಿದ್ದಪ್ಪ ಪಾಟೀಲ್

ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ಜೂ.18ರಂದು ಬೆಳಗ್ಗೆ 11.30ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಪಂ ಸಿಇಒ ಡಾ.ಗಿರೀಶ್ ಬದೋಲೆ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.