Oplus_131072 
ಜಿಲ್ಲೆ

ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ 17ಕ್ಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ದಿಢೀರ್ ಹೆಚ್ಚಳ ಮಾಡಿದ ಕ್ರಮ ವಿರೋಧಿಸಿ ಜಿಲ್ಲಾ ಬಿಜೆಪಿಯಿಂದ ಸೋಮವಾರ (ಜೂ.17) ನಗರದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ್ ತಿಳಿಸಿದ್ದಾರೆ. ಬೆಳಗ್ಗೆ 10.30ಕ್ಕೆ ನಗರದ ಡಾ.ಅಂಬೇಡ್ಕರ್ ವೃತ್ತದ ಹತ್ತಿರದ ಪ್ರವಾಸಿ ಮಂದಿರದಲ್ಲಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಪದಾಧಿಕಾರಿಗಳು, ಕಾರ್ಯಕರ್ತರು ಜಮಾಯಿಸಿ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ವಾಹನಗಳಿಗೆ ಕೈಯಿಂದ ತಳ್ಳುತ್ತ ವಿನೂತನ ರೀತಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಪಕ್ಷದ ಕಾರ್ಯಕರ್ತರಲ್ಲದೆ ಜನ ಹಿತದ ಈ ಹೋರಾಟದಲ್ಲಿ ಸಾರ್ವಜನಿಕರು, ವಿವಿಧ ಸಂಘ, ಸಂಸ್ಥೆಯವರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.