ಜಿಲ್ಲೆ

ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಕರೆಯಿರಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಿ ಎರಡು ವಾರ ಕಳೆದರೂ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಮೂಲಕ ನಡೆಯುತ್ತಿರುವ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಕರೆದಿಲ್ಲ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಅರುಣ ಕೊಡಗೆ ದೂರಿದ್ದಾರೆ. ತಕ್ಷಣ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಕರೆಯಬೇಕು. ನಿರ್ಲಕ್ಷ್ಯ ಮಾಡಿದರೆ ಹೋರಾಟ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.