ಜಿಲ್ಲೆ

ಯುವ ಕೇಂದ್ರದಿಂದ ಯೋಗ ದಿನಾಚರಣೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ನೆಹರು ಯುವ ಕೇಂದ್ರ ಹಾಗೂ ಕಾಲೇಜುಗಳ ಸಹಯೋಗದಲ್ಲಿ ನಗರದ ತೋಟಗಾರಿಕೆ ಕಾಲೇಜು, ಸರ್ಕಾರಿ ಐಟಿಐ ಹಾಗೂ ಕಮಠಾಣದ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಯೋಗ ಶಿಕ್ಷಕರಾದ ಶಿವಾನಂದ, ತುಕಾರಾಮ ಹಾಗೂ ಶಿವಕುಮಾರ ಅವರು ಯೋಗದ ವಿವಿಧ ಭಂಗಿಗಳನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟರು.
ಕಾರ್ಯಕ್ರಮದಲ್ಲಿ ಮಾತನಾಡಿದ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ ಅವರು, ಯೋಗದಿಂದ ಆರೋಗ್ಯಪೂರ್ಣ ರಾಷ್ಟ್ರ ನಿರ್ಮಾಣ ಸಾಧ್ಯವಿದೆ ಎಂದು ಹೇಳಿದರು.
ನೆಹರು ಯುವ ಕೇಂದ್ರವು ಶಾಲಾ, ಕಾಲೇಜು, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿಧೆಡೆ ಯೋಗ ದಿನಾಚರಣೆ ಕಾರ್ಯಕ್ರಮ ಸಂಘಟಿಸಿ, ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರಿಗೆ ಯೋಗದ ಮಹತ್ವವನ್ನು ಮನವರಿಕೆ ಮಾಡಿದೆ ಎಂದು ತಿಳಿಸಿದರು.
ತೋಟಗಾರಿಕೆ ಕಾಲೇಜು ಡೀನ್ ಡಾ. ಎಸ್.ವಿ. ಪಾಟೀಲ, ಸರ್ಕಾರಿ ಐಟಿಐ ಪ್ರಾಚಾರ್ಯ ಲಕ್ಷ್ಮಿಕಾಂತ, ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಗೋವಿಂದ, ಡಾ. ಕಾವಳೆ, ಡಾ. ದುಷ್ಯಂತ, ಸೋಮನಾಥ, ಕಾಲೇಜುಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.