ಜಿಲ್ಲೆ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘವು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಕೆಸಿಇಟಿ ಹಾಗೂ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಸಾಧನೆಗೈದ ಗೊಂಡ(ಕುರುಬ) ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕೂ ಹೆಚ್ಚು ಅಂಕ ಗಳಿಸಿದ, ಕೆಸಿಇಟಿ, ನೀಟ್‍ನಲ್ಲಿ ಉತ್ತಮ ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಜೂನ್ 31 ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಜೋಳದಾಪಕೆ ತಿಳಿಸಿದ್ದಾರೆ.
ಬೀದರ್‍ನ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜುಲೈ 14 ರಂದು ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಗೊಂಡ(ಕುರುಬ) ಸಮುದಾಯದ ಅರ್ಹ ವಿದ್ಯಾರ್ಥಿಗಳು ನಗರದ ಬಿ.ವಿ.ಬಿ. ಕಾಲೇಜು ರಸ್ತೆಯಲ್ಲಿ ಇರುವ ಎಕ್ಸಿಸ್ ಬ್ಯಾಂಕ್ ಕೆಳಗಡೆಯ ಆದರ್ಶ ಐಟಿಐನಲ್ಲಿ ಅರ್ಜಿ ಸಲ್ಲಿಸಬಹುದು. ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ತಮ್ಮ ಮೊಬೈಲ್ ಸಂಖ್ಯೆ 9880802326, ಕಾಲೇಜಿನ ತರಬೇತುದಾರ ವಿಜಯಕುಮಾರ ಬ್ಯಾಲಹಳ್ಳಿ (8970189141) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.