ಭಾಲ್ಕಿ: ವಿಧಾನ ಪರಿಷತ್ ಸದಸ್ಯರಾಗಿ ಸತತ ಎರಡನೇ ಅವಗೆ ಆಯ್ಕೆಯಾದ ಡಾ.ಚಂದ್ರಶೇಖರ ಪಾಟೀಲ್ ಅವರನ್ನು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಸನ್ಮಾನಿಸಿ ಆಶೀರ್ವದಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಎಂಎಲ್ಸಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಪಾಟೀಲ್ ಅವರನ್ನು ಪೂಜ್ಯರು ಭೇಟಿಯಾಗಿ ಸನ್ಮಾನಿಸಿ, ಜನರು ತಮ್ಮ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಅವರ ಆಶೋತ್ತರಗಳಿಗೆ ಸ್ಪಂದಿಸಿ ಒಳ್ಳೆಯ ಹೆಸರು ಪಡೆಯಿರಿ ಎಂದು ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಉದ್ಯಮಿ ದೇವರಾಜ ತಾಡಂಪಳ್ಳಿ ಇದ್ದರು.