ಬೀದರ್: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಹಾಗೂ ವಿಶ್ವ ಭಗೀರಥ ಟ್ರಸ್ಟ್ ವತಿಯಿಂದ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್‍ನಲ್ಲಿ ಜುಲೈ 14 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ ರಾಷ್ಟ್ರಮಟ್ಟದ ಉಪ್ಪಾರ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಮದುವೆ ಆಗ ಬಯಸುವ ರಾಜ್ಯ ಹಾಗೂ ದೇಶದ ಉಪ್ಪಾರ ಸಮಾಜದ ವಧು-ವರರು ಸಮಾವೇಶದಲ್ಲಿ ಪಾಲ್ಗೊಳ್ಳಬಹುದು ಎಂದು ಬೀದರ್ ಜಿಲ್ಲಾ ಉಪ್ಪಾರ(ಸಗರ) ಸಮಾಜ ಸಂಘದ ಅಧ್ಯಕ್ಷ ತಾನಾಜಿ ಸಗರ್ ತಿಳಿಸಿದ್ದಾರೆ.
ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9449886150, 9448225046 ಅಥವಾ 9448076415 ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.