ಜಿಲ್ಲೆ

ನೀಟ್ ಸಾಧಕರಿಗೆ ಪ್ರತಿಭಾ ಪುರಸ್ಕಾರ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಪ್ರೌಢ ಶಾಲೆ ವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ನೀಟ್ನಲ್ಲಿ 720ಕ್ಕೆ 450ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ನೋಂದಾಯಿಸಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಹೇಳಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಶಾಹೀನ್ ಶಿಕ್ಷಣ ಸಂಸ್ಥೆಯಿಂದ ಜು.13ರಂದು ಸಂಜೆ 5ಕ್ಕೆ ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪುರಸ್ಕಾರ ಮಾಡಿ ಗೌರವಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ಜು.11 ರೊಳಗಾಗಿ ಇಲ್ಲಿನ ಬಿವಿಬಿ ಕಾಲೇಜು ರಸ್ತೆಯ ಮುದ್ದಣ್ಣ ಕಾಂಪ್ಲೆಕ್ಸ್ ನಲ್ಲಿರುವ ಪರಿಷತ್ನ ಕಚೇರಿಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ನೀಟ್ ಅಂಕಪಟ್ಟಿಯೊಂದಿಗೆ ಹೆಸರು ನೋಂದಾಯಿಸಬೇಕು. ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9986792323, 9341652131ಗೆ ಸಂಪಕರ್ಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.