ಬೀದರ್: ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಕಮಲನಗರದ ಸುರೇಶ್ ಬಾಲಾಜಿ ಮೇತ್ರೆ ಅವರನ್ನು ನೇಮಕ ಮಾಡಲಾಗಿದೆ.
ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ವಿಜಯ ನಾಯಕ್ ಎಂ. ಅವರ ಒಪ್ಪಿಗೆ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ರಾಕೇಶ್ ಎನ್ ಕುರುಬಖೆಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.