ಬೀದರ್: ಜಿಲ್ಲೆಯ ಉಪ್ಪಾರ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಹೆಸರು ನೋಂದಣಿಗೆ ಆಗಸ್ಟ್ 23 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಉಪ್ಪಾರ ಸಮಾಜ ಸಂಘದ ಅಧ್ಯಕ್ಷ ತಾನಾಜಿ ಸಗರ್ ತಿಳಿಸಿದ್ದಾರೆ.
ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ 85 ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಸಬಹುದು ಎಂದು ಹೇಳಿದ್ದಾರೆ.
ಸಮಾಜದ ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಹಾಗೂ ಇತರ ವಿದ್ಯಾರ್ಥಿಗಳಿಗೆ ಸಾಧನೆಗೆ ಪ್ರೇರಣೆ ನೀಡಲು ಜಿಲ್ಲಾ ಉಪ್ಪಾರ ಸಮಾಜ ಸಂಘದಿಂದ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8970497591 ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.
ನಗರದಲ್ಲಿ ಆಗಸ್ಟ್ 25 ರಂದು ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಜರುಗಲಿದೆ ಎಂದು ತಿಳಿಸಿದ್ದಾರೆ.