ಬೀದರ್: ಕಮಲನಗರ-ಬೀದರ್ ರಾಷ್ಟ್ರೀಯ ಹೆದ್ದಾರಿ-50ರ ಗುಣಮಟ್ಟದ ಸ್ಥಿತಿಗತಿ ಕುರಿತು 30 ದಿನಗಳ ಒಳಗೆ ಸಮಗ್ರ ತಾಂತ್ರಿಕ ವರದಿ ಸಲ್ಲಿಸುವಂತೆ ಸಂಸದ ಸಾಗರ್ ಖಂಡ್ರೆ ಅವರು ಕಲಬುರಗಿ ಈಶಾನ್ಯ ವಲಯದ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಅವರಿಗೆ ತಿಳಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಖಂಡ್ರೆ, ಹೆದ್ದಾರಿ ಕಳಪೆ ಕಾಮಗಾರಿಯಿಂದಾಗಿ ರಸ್ತೆಯಲ್ಲಿ ಬಿರುಕುಗಳು ಬಿಟ್ಟು ಸಾಕಷ್ಟು ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಹೆದ್ದಾರಿ ಗುಣಮಟ್ಟ ಕುರಿತು ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ವರದಿ ಬಂದ ತಕ್ಷಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.