ಜಿಲ್ಲೆ

ರಕ್ತದಾನ ಶಿಬಿರ 15ರಂದು

ರೇವಣಸಿದ್ದಪ್ಪ ಪಾಟೀಲ್

ಬೀದರ್: ಹಣ್ಮು ಪಾಜಿ ಗೆಳೆಯರ ಬಳಗ ಹಾಗೂ ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಸಂಸ್ಥೆ ವತಿಯಿಂದ ನಗರದ ಬ್ರಿಮ್ಸ್ ಆಸ್ಪತ್ರೆ ಆವರಣದಲ್ಲಿ ಇರುವ ರಕ್ತನಿಧಿ ಕೇಂದ್ರದಲ್ಲಿ ಆ. 15 ರಂದು ಬೆಳಿಗ್ಗೆ 11ಕ್ಕೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಸ್ವಾತಂತ್ರ್ಯ ದಿನ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಅಂಗವಾಗಿ ಶಿಬಿರ ಸಂಘಟಿಸಲಾಗಿದೆ ಎಂದು ಚಿತ್ರನಟ ಹಣ್ಮುಪಾಜಿ ತಿಳಿಸಿದ್ದಾರೆ.
ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಶಿಬಿರವನ್ನು ಉದ್ಘಾಟಿಸುವರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಬಿರಾದಾರ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುರಾವ್ ಮಲ್ಕಾಪುರೆ, ಪ್ರಮುಖರಾದ ಪಾಲಾಕ್ಷಯ್ಯ ಹಿರೇಮಠ, ಪೀರಪ್ಪ ಔರಾದೆ ಹಾಗೂ ಉಮೇಶ ಶಹಾಪುರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಹೇಳಿದ್ದಾರೆ.
ರಕ್ತದಾನ ಶ್ರೇಷ್ಠ ದಾನವಾಗಿದೆ. ತುರ್ತು ಸಂದರ್ಭದಲ್ಲಿ ಜೀವ ಉಳಿಸಲು ನೆರವಾಗುತ್ತದೆ. ಕಾರಣ, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.