ಬೀದರ್: ಕೋಲ್ಕತ್ತದ ಆರ್.ಜಿ. ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದಿರುವ ಘಟನೆಯನ್ನು ಕರ್ನಾಟಕ ಪಶು ವೈದ್ಯಕೀಯ ಸಂಘ ತೀವ್ರವಾಗಿ ಖಂಡಿಸಿದೆ.
ಈಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ವಿರುದ್ಧ ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಸಂಘದ ರಾಜ್ಯ ಅಧ್ಯಕ್ಷ ಡಾ. ಶಿವಶರಣಪ್ಪ ಜಿ. ಯಲಗೋಡ ತಿಳಿಸಿದ್ದಾರೆ.
ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ವೈದ್ಯ ಸಂಘಟನೆಗಳು ದೇಶದಾದ್ಯಂತ ನಡೆಸುತ್ತಿರುವ ಹೋರಾಟಕ್ಕೆ ಸಂಘದ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.