ಜಿಲ್ಲೆ

ಹಾಸ್ಟೆಲ್, ಅಂಗನವಾಡಿ ಕೇಂದ್ರಗಳಿಗೆ ಭೇಟಿ

ರಮೇಶ ಮೇಳಕುಂದಾ

ಕಲಬುರಗಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಅಪರ್ಣ ಕೊಳ್ಳ ಅವರು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿ ಕುಂದುಕೊರತೆ ಆಲಿಸಿದರು. ಅಂಗನವಾಡಿ ಮಕ್ಕಳಿಗೆ ಸರ್ಕಾರದ ಸೌಲಭ್ಯ ಸರಿಯಾಗಿ ಒದಗಿಸಬೇಕು. ಯಾವುದೇ ಲೋಪ ಆಗದಂತೆ ಮುನ್ನೆಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೆಟ್ರಿಕ್‌ಪೂರ್ವ ಹಾಗೂ ಮೆಟ್ರಿಕ್ ನಂತರ ವಸತಿ ನಿಲಯಗಳಿಗೆ ತೆರಳಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡು, ವಸತಿನಿಲಯಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಬೇಕು ಎಂದರು.
ಕೇAದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜೇವರ್ಗಿ ತಾಲೂಕು ಪೊಲೀಸ್ ಠಾಣೆಯಲ್ಲಿ ಮಕ್ಕಳ ಸ್ನೇಹಿ ಘಟಕ ಉದ್ಫಾಟಿಸಿದರು. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾನಗರದಲ್ಲಿರುವ ವಸತಿನಿಲಯಕ್ಕೆ ಭೇಟಿ ನೀಡಿ ಅವ್ಯವಸ್ಥೆ ಸರಿಪಡಿಸಿಕೊಳ್ಳಲು ಸೂಚನೆ ನೀಡಿದರು. ಹಾಜರಾತಿ ಪುಸ್ತಕದಲ್ಲಿ ೨೦೦ ಮಕ್ಕಳಿದ್ದರೂ ಸದ್ಯ ೧೩೫ ಇದ್ದಾರೆ. ಉಳಿದವರು ಇಲ್ಲದಿರುವುದನ್ನು ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಡಿವೈಎಸ್‌ಪಿ ಬಿಂದುರಾಣಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೀಮರಾಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾದಿಕಾರಿ (ಸಾಂಸ್ಥಿಕ ) ಮಂಜುಳಾ ರೆಡ್ಡಿ ಇತರರಿದ್ದರು.