ಜಿಲ್ಲೆ

ಪಂಚಾಯಿತಿ ಅಧ್ಯಕ್ಷರಾಗಿ ಸಾಯಿಚೈತನ್ಯ ಆಯ್ಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ತಾಲ್ಲೂಕಿನ ಅಲಿಯಂಬರ್ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಾಯಿಚೈತನ್ಯ ಸಂಜುಕುಮಾರ ಕೋಳಿ ಅವರನ್ನು ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸನ್ಮಾನಿಸಲಾಯಿತು.
ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ಕೊಡಲಾಗುವುದು. ಶಾಲೆಗೆ ಅಗತ್ಯ ಸೌಕರ್ಯ ಒದಗಿಸಲಾಗುವುದು ಎಂದು ಸಾಯಿಚೈತನ್ಯ ಭರವಸೆ ನೀಡಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸಂತೋಷ ಪಡಸಲೆ ಅವರು ನೂತನ ಅಧ್ಯಕ್ಷರನ್ನು ಶಾಲು ಹೊದಿಸಿ ಸತ್ಕರಿಸಿದರು. ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.