ಜಿಲ್ಲೆ

ಪಟ್ಟದ್ದೇವರ ವಿದ್ಯಾದಾನ ಶ್ರೇಷ್ಠ ಕಾರ್ಯ

ರೇವಣಸಿದ್ದಪ್ಪ ಪಾಟೀಲ್

ಭಾಲ್ಕಿ: ಎರಡು ರಾಜ್ಯಗಳಿಗೆ ಹೊಂದಿಕೊಂಡಿರುವ ಗಡಿ ಜಿಲ್ಲೆ ಬೀದರ್ ನಲ್ಲಿ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಶೈಕ್ಷಣಿಕ ಕೇಂದ್ರ ಸ್ಥಾಪಿಸಿ ಗ್ರಾಮೀಣ ಮಕ್ಕಳಿಗೆ ವಿದ್ಯಾದಾನ ಮಾಡುತ್ತಿರುವುದು ಅತ್ಯಂತ ಶ್ರೇಷ್ಠ ಕಾರ್ಯ ಎಂದು ಡಾ.ಹಂಸಾ ಗಿರೀಶ್ ಬದೋಲೆ ಶ್ಲಾಸಿದರು.
ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ, ಸಿಎ ಫೌಂಡೇಷನ್ ಕಾರ್ಯಾಗಾರ ಉದ್ಘಾಟಿಸಿದ ಅವರು, ದಾನಗಳಲ್ಲಿ ವಿದ್ಯಾದಾನ ಶ್ರೇಷ್ಠವಾದದ್ದು. ಅಂಥ ಮಹೋನ್ನತ ಕಾರ್ಯವನ್ನು ಪೂಜ್ಯರು ಮಾಡುತ್ತಿದ್ದಾರೆ ಎಂದರು.
ಬೆಂಗಳೂರು, ನವದೆಹಲಿ, ಹೈದರಾಬಾದ್ ನಂಥ ಮಹಾನಗರಗಳಿಗೆ ಸೀಮಿತವಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಇದೀಗ ಗುರುಕುಲದಲ್ಲಿ ಆರಂಭಿಸಿರುವುದು ಸಂತಸದ ಸಂಗತಿ. ಈ ಭಾಗದ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಇಂಡಿಯಾ ಐಎಎಸ್ ಅಕಾಡೆಮಿ ಸಿಇಒ ಶ್ರೀನಿವಾಸ ಪಿ.ಸಿ. ಮಾತನಾಡಿ, ಸರ್ಕಾರದ ಎಲ್ಲ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಶೈಕ್ಷಣಿಕ ಅಭ್ಯಾಸದ ಜತೆಗೆ ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆಯಬೇಕು ಎಂದು ಸಲಹೆ ನೀಡಿದರು.
ಅಕಾಡೆಮಿ ನಿರ್ದೇಶಕ ಅಭಿಷೇಕ ಜೋಗಣ್ಣ, ಎಂವೈಪಿಎಎಲ್ ವ್ಯವಸ್ಥಾಪಕ ಮಯೂರ ಮುನ್ನಳಿಮಠ ವಿಶೇಷ ಉಪನ್ಯಾಸ ನೀಡಿದರು. ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕ ಮಾತನಾಡಿದರು.
ಆಡಳಿತಾಕಾರಿ ಮೋಹನರಡ್ಡಿ ಅಧ್ಯಕ್ಷತೆ ವಹಿಸಿದ್ದರು. ಗುರುಕುಲದ ಹಳೆಯ ವಿದ್ಯಾರ್ಥಿ ಅಕ್ಷಯ ಮುನ್ನಳ್ಳಿ, ಮಹಾಲಿಂಗ ಖಂಡ್ರೆ, ಪತ್ರಕರ್ತ ಬಸವರಾಜ ಪ್ರಭಾ, ಪಾಲಕರ ಪ್ರತಿನಿ ಅಶ್ವಿನಿ ಕನಶೆಟ್ಟೆ ಇತರರಿದ್ದರು. ಡಾ.ಕಿರಣ ಸಜ್ಜನಶೆಟ್ಟಿ ಸ್ವಾಗತಿಸಿದರು. ಲಕ್ಷ್ಮಣ ಮೇತ್ರೆ ನಿರೂಪಣೆ ಮಾಡಿದರು. ಸುಧಾಕರ ಬಿರಾದಾರ್ ವಂದಿಸಿದರು.