filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 35; 
ಜಿಲ್ಲೆ

ಮಕ್ಕಳ ಹಕ್ಕು ಉಲ್ಲಂಘನೆ ಅಧಿಕ

ರೇವಣಸಿದ್ದಪ್ಪ ಪಾಟೀಲ್

ಔರಾದ್: ಎಲ್ಲೆಡೆ ಪ್ರಸ್ತುತ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಅವರ ಮುಗ್ಧತೆ, ನಿಷ್ಕಲ್ಮಷ ಪ್ರೀತಿ ಕಣ್ಮರೆಯಾಗುತ್ತಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ತಹಸಿಲ್ ಕಚೇರಿಯಲ್ಲಿ ಸಂಜೆ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಮಕ್ಕಳಿಗಿರುವ ಸಾಮಾನ್ಯ ಹಕ್ಕುಗಳ ಕುರಿತು ಮಾಹಿತಿ ಕೊರತೆ ಇದ್ದು, ಇದರ ಬಗ್ಗೆ ಅಧಿಕಾರಿಗಳು ಅರಿತು ಕೆಲಸ ಮಾಡುವಂತೆ ಸೂಚಿಸಿದರು.
ತಾಲೂಕಿನ ಕೌಡಗಾಂವ, ಸಂತಪುರ, ವಡಗಾಂವ, ಚಿಂತಾಕಿ ಹಾಗೂ ಸುಂಧಾಳ ಗ್ರಾಮದ ವಸತಿ ಶಾಲೆ, ವಸತಿ ನಿಲಯ, ಸರ್ಕಾರಿ ಶಾಲೆ, ಗ್ರಾಪಂ ಕಚೇರಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿರುವೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಸೌಲಭ್ಯ ಒದಗಿಸುವಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸರ್ಕಾರದಿಂದ ಮಕ್ಕಳಿಗಾಗಿ ದೊರೆಯುವ ಎಲ್ಲ ಸೌಲಭ್ಯಗಳು ಸಕಾಲದಲ್ಲಿ ಸಿಗುವಂತೆ ಮಾಡಿ ಅವರ ಆರೋಗ್ಯ, ಶಿಕ್ಷಣಕ್ಕೆ ಅನುಕೂಲವಾಗುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಬಿಇಒ ಸುಧಾರಾಣಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಧೂಳಪ್ಪ, ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅನೀಲಕುಮಾರ ಮೇಲ್ದೊಡ್ಡಿ, ರವೀಂದ್ರ ಮೇತ್ರೆ, ಗೌರಿಶಂಕರ ಪರತಾಪುರ ಇತರರಿದ್ದರು.