ಜಿಲ್ಲೆ

ದೊಡ್ಡೆಗೆ ಕ್ರಿಯಾಶೀಲ ಸೇವಾ ರತ್ನ ಪ್ರಶಸ್ತಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಟಿ.ಆರ್. ದೊಡ್ಡೆ ಅವರಿಗೆ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕವು ಪ್ರಸಕ್ತ ಸಾಲಿನ ಸರ್ಕಾರಿ ನೌಕರರ ಕ್ರಿಯಾಶೀಲ ಸೇವಾ ರತ್ನ ಪ್ರಶಸ್ತಿ ನೀಡಿದೆ.
ನಗರದ ಬೆಲ್ದಾಳೆ ಕನ್ವೆನ್ಷನ್ ಹಾಲ್‍ನಲ್ಲಿ ಗುರುವಾರ ನಡೆದ ತಾಲ್ಲೂಕುಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಪ್ರಶಸ್ತಿ ಪ್ರದಾನ ಮಾಡಿದರು.
ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಪ್ರಶಸ್ತಿ ಸಂದಿದೆ.
ಔರಾದ್ ತಾಲ್ಲೂಕಿನ ಹೆಡಗಾಪುರ ಗ್ರಾಮದ ಟಿ.ಆರ್. ದೊಡ್ಡಿ ಅವರು ವೃತ್ತಿ ಜೀವನ ಆರಂಭಿಸಿದ್ದು ಪ್ರಾಥಮಿಕ ಶಾಲಾ ಶಿಕ್ಷಕರಾಗಿ. ನಂತರ ಪ್ರೌಢಶಾಲಾ ಶಿಕ್ಷಕ, ಡಯಟ್ ಉಪನ್ಯಾಸಕ, ಸರ್ವ ಶಿಕ್ಷಣ ಅಭಿಯಾನದ ಸಮನ್ವಯಾಧಿಕಾರಿ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಸೇರಿ ವಿವಿಧ ಹುದ್ದೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಸದ್ಯ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದಾರೆ. ಅವರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ.
ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಲೀಂ ಪಾಶಾ, ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್, ಶಿವರಾಜ ಕಪಲಾಪುರೆ, ಶಿವಶರಣಪ್ಪ ಹುಗ್ಗಿ ಪಾಟೀಲ, ಸೂರ್ಯಕಾಂತ ಶಿಂಗೆ, ಬಲವಂತ ರಾಠೋಡ್, ವೈಜಿನಾಥ ಶಾಳೆ, ರವಿಕುಮಾರ ಕುಮನೂರ, ಝಾಕೀರ್ ಹುಸೇನ್, ಸುವರ್ಣ ವಾಘಮಾರೆ, ಎಂ.ಡಿ. ಶಾಬುದ್ದಿನ್, ಸಂಜೀವಕುಮಾರ ಸ್ವಾಮಿ, ಚಾಮುಂಡೇಶ್ವರಿ, ಗೋವಿಂದ ಪೂಜಾರಿ, ಚಂದ್ರಕಾಂತ ದಂಡೆ ಇದ್ದರು.