ಜಿಲ್ಲೆ

ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ಸೆ.15ಕ್ಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಅಮೆರಿಕದಲ್ಲಿ ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂ ವಿದೇಶಿ ನೆಲದಲ್ಲಿ ಭಾರತದ ಮಾನವನ್ನು ಹರಾಜು ಹಾಕುತ್ತಿರುವುದು ಖಂಡಿಸಿ ಹಾಗೂ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ಭಾನುವಾರ (ಸೆ.15) ಬೆಳಗ್ಗೆ 10ಕ್ಕೆ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಗರದ ರಸ್ತೆ ರಿಪೇರಿ, ಅತಿವೃಷ್ಟಿ ಪರಿಹಾರ, ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ನಾಲಿಗೆ ಕತ್ತರಿಸುವೆ ಎಂದು ಹೇಳಿರುವ ಎಂಎಲ್ಸಿ ಡಾ.ಚಂದ್ರಶೇಖರ ಪಾಟೀಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೋರಾಟ ಆಯೋಜಿಸಲಾಗಿದೆ. ನಗರದ ಗಣೇಶ ಮೈದಾನದಿಂದ ಶಿವಾಜಿ ವೃತ್ತದ ರ್ಯಾಲಿ ನಡೆಯಲಿದೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಎನ್. ಮಹೇಶ, ಶಾಸಕರಾದ ಪ್ರಭು ಚವ್ಹಾಣ್, ಡಾ.ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ, ಡಾ.ಸಿದ್ದಲಿಂಗಪ್ಪ ಪಾಟೀಲ್, ಮುಖಂಡ ರುದ್ರಯ್ಯ ಇತರರು ಪಾಲ್ಗೊಳ್ಳುವರು. ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಕೋರಿದ್ದಾರೆ.