ಜಿಲ್ಲೆ

ಬಹು ದಿನಗಳ ಬೇಡಿಕೆ ಈಡೇರಿಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಘೋಷಣೆ ಮಾಡಿದ್ದರಿಂದ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಈಡೇರಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಪ್ರತಿಕ್ರಿಯಿಸಿದ್ದಾರೆ.
ಪ್ರತ್ಯೇಕ ಸಚಿವಾಲಯದಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದು ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ವಿಶೇಷ ಪ್ರಯತ್ನದಿಂದಾಗಿ ಸಚಿವ ಸಂಪುಟ ಸಭೆಯಲ್ಲಿ ಪ್ರತ್ಯೇಕ ಸಚಿವಾಲಯ, ಬೀದರ್ ಮಹಾನಗರ ಪಾಲಿಕೆ, ಹುಲಸೂರಿನಲ್ಲಿ ಪ್ರಜಾಸೌಧ ನಿರ್ಮಾಣ ಮತ್ತಿತರ ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಇದಕ್ಕಾಗಿ ಈಶ್ವರ ಖಂಡ್ರೆ ಅವರಿಗೆ ಕೃತಜ್ಞತೆ ಸಲ್ಲಿಸಲಾಗುವುದು ತಿಳಿಸಿದ್ದಾರೆ.