ಜಿಲ್ಲೆ

ನಾರಂಜಾ ಕಾರ್ಖಾನೆ ಮಹಾಸಭೆ 25ಕ್ಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ತಾಲೂಕಿನ ಜನವಾಡ ಬಳಿಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್ಎಸ್ಎಸ್ಕೆ) ಆವರಣದಲ್ಲಿ ಸೆ.25ರಂದು ಬೆಳಗ್ಗೆ 11ಕ್ಕೆ ಕಾರ್ಖಾನೆಯ 39ನೇ ವಾರ್ಷಿಕ ಮಹಾಸಭೆ ಜರುಗಲಿದೆ.
ಕಾರ್ಖಾನೆ ಅಧ್ಯಕ್ಷ ಡಿ.ಕೆ. ಸಿದ್ರಾಮ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ವ ಸದಸ್ಯರು ಕಡ್ಡಾಯವಾಗಿ ಮಹಾಸಭೆಯಲ್ಲಿ ಭಾಗವಹಿಸಬೇಕು ಎಂದು ವ್ಯವಸ್ಥಾಪಕ ನಿರ್ದೇಶಕರು ಮನವಿ ಮಾಡಿದ್ದಾರೆ.