ಜಿಲ್ಲೆ

ಸಮಸ್ಯೆಗೆ ಸ್ಪಂದಿಸದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಜನವಾಡದ ನಾಡ ತಹಸೀಲ್ದಾರ್ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ರಾಜಕುಮಾರ ಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ತಹಸೀಲ್ದಾರ್ ಅವರಿಗೆ ಬುಧವಾರ ಮನವಿಪತ್ರ ಸಲ್ಲಿಸಿ, ಕೆಲಸ ನಿಮಿತ್ತ ಕಚೇರಿಗೆ ಬರುವ ಜನರ ಸಮಸ್ಯೆಗಳನ್ನು ನಾಡ ತಹಸೀಲ್ದಾರ್ ಅಶೋಕ ರಾಜಗೀರಾ ಆಲಿಸುತ್ತಿಲ್ಲ. ವಿವಿಧ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.