ಜಿಲ್ಲೆ

ಯಂಗ್ ಬ್ರಿಗೇಡ್ ಅಧ್ಯಕ್ಷರಾಗಿ ಮೂಲಗೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕಾಂಗ್ರೆಸ್ ಸೇವಾ ದಳ ಯಂಗ್ ಬ್ರಿಗೇಡ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಇಲ್ಲಿಯ ಯುವ ಮುಖಂಡ ಸಂಗಮೇಶ ಮೂಲಗೆ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾ ದಳ ಯಂಗ್ ಬ್ರಿಗೇಡ್ ಅಧ್ಯಕ್ಷ ಜುನೈದ್ ಪಿ.ಕೆ. ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸಂಗಮೇಶ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಒಂದು ದಶಕದಿಂದ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾರೆ.