ಜಿಲ್ಲೆ

ಡಿಎಸ್ಎಸ್ ಮಾಹಾಧಿವೇಶನ ಅ.5ರಂದು

ರೇವಣಸಿದ್ದಪ್ಪ ಪಾಟೀಲ್

ಬೀದರ್: ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ರಾಜ್ಯಮಟ್ಟದ ಸರ್ವ ಸದಸ್ಯರ ಮಾಹಾಧಿವೇಶನ ಅ.5, 6ರಂದು ತುಮಕೂರಿನ ಎಂಪ್ರೆಸ್ ಅಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ.
ಅ.5ರಂದು ಬೆಳಗ್ಗೆ 11ಕ್ಕೆ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಉದ್ಘಾಟಿಸುವರು. ಎರಡು ದಿನ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಿತಿಯ ಜಿಲ್ಲಾ, ತಾಲೂಕು ಘಟಕದ ಪದಾಧಿಕಾರಿಗಳು, ಸಕ್ರಿಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.