ಬೀದರ್: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅ.17ರಂದು ಅದ್ದೂರಿಯಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಅಂದು ಬೆಳಗ್ಗೆ 8.30ಕ್ಕೆ ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ 10.30ಕ್ಕೆ ಜಯಂತ್ಯುತ್ಸವ ನಡೆಸಿದ ನಂತರ 10:45ಕ್ಕೆ ಮೆರವಣಿಗೆ, ಮಧ್ಯಾಹ್ನ 12.30ಕ್ಕೆ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ನಗರಸಭೆಯಿಂದ ಕುಡಿಯುವ ನೀರಿನ ವ್ಯವಸ್ಥೆ ಜತೆಗೆ ಸ್ವಚ್ಛತೆ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೆರವಣಿಗೆಯಲ್ಲಿ ಎರಡು ಕಲಾ ತಂಡಗಳಿರುವಂತೆ ನೋಡಿಕೊಳ್ಳಬೇಕು ಮತ್ತು ಎಲ್ಲ ಸರ್ಕಾರಿ ಕಚೇರಿಗಳ ಮೇಲೆ ದೀಪಾಲಂಕಾರ ಮಾಡಬೇಕು. ಹಿರಿಯ ಸಾಹಿತಿ ಡಾ.ರಾಮಚಂದ್ರ ಗಣಾಪುರ ಅವರನ್ನು ವಿಶೇಷ ಉಪನ್ಯಾಸಕರಾಗಿ ಆಹ್ವಾನಿಸಲಾಗುವುದು ಎಂದರು.
ಸಹಾಯಕ ಆಯುಕ್ತ ಮಹ್ಮದ್ ಶಕೀಲ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಕಾರಿ ಶಿವಮಾನಪ್ಪ, ಡಿವೈಎಸ್ಪಿ ಶಿವನಗೌಡ ಪಾಟೀಲ್, ಎಂ.ಎಸ್. ಕಟಗಿ, ಪಂಡಿತ ಚಿದ್ರಿ, ಜಗನ್ನಾಥ ಜಮಾದಾರ, ಶಾರದಾ ಕಲ್ಮಲಕರ್, ನಂದಕುಮಾರ, ಸಂತೋಷ ಜೋಳದಾಪಕಾ, ಮಾಳಪ್ಪ ಅಡಸಾರೆ ಇತರರಿದ್ದರು.