ಜಿಲ್ಲೆ

ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ 9 ರಂದು

ರೇವಣಸಿದ್ದಪ್ಪ ಪಾಟೀಲ್

ಬೀದರ್: ಇಲ್ಲಿಯ ಇನ್ಫಿನಿಟಿ ಶಾಲೆಯು ಜೀವಾ ಸಂಸ್ಥೆಯ ಸಹಯೋಗದೊಂದಿಗೆ ನವೆಂಬರ್ 9 ರಂದು ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಮಗ್ರ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಮ್ಮಿಕೊಂಡಿದೆ.

ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.30 ರ ವರೆಗೆ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಯಲಿದೆ. ನಂತರ ಪಾಲಕರಿಗೆ ಪುನಃಶ್ಚೇತನ ಕಾರ್ಯಾಗಾರ ಜರುಗಲಿದೆ ಎಂದು ಶಾಲೆಯ ಸಂಸ್ಥಾಪಕ ನಿರಂಜನ ಶೀಲವಂತ ತಿಳಿಸಿದ್ದಾರೆ.

ಜಿಲ್ಲೆಯ ವಿದ್ಯಾರ್ಥಿಗಳಿಗೆ ಸೂಕ್ತ ವೃತ್ತಿಗಳ ಆಯ್ಕೆಗೆ ಮಾರ್ಗದರ್ಶನ ನೀಡಲು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಜೀವಾ ಸಂಸ್ಥೆಯ ಅನುಭವಿ ವೃತ್ತಿ ಮಾರ್ಗದರ್ಶಕರು, ಮನಶಾಸ್ತ್ರಜ್ಞರು ವಿವಿಧ ವೃತ್ತಿಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ವೈದ್ಯಕೀಯ, ಎಂಜಿನಿಯರಿಂಗ್ ಹೊರತುಪಡಿಸಿಯೂ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಹಲವಾರು ಕೋರ್ಸ್‍ಗಳು ಇವೆ. ವಿದ್ಯಾರ್ಥಿಗಳು ಸಾಧನೆಗೆ ತಮ್ಮ ಆಸಕ್ತಿಗೆ ಅನುಗುಣವಾದ ಕೋರ್ಸ್‍ಗಳನ್ನು ಆಯ್ಕೆ ಮಾಡಿಕೊಳ್ಳುವುದು ಅವಶ್ಯಕವಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ವಿದ್ಯಾರ್ಥಿಗಳು ಕಾರ್ಯಾಗಾರದ ಲಾಭ ಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ. ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ  9591996002  ಅಥವಾ  9019484190 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.