ಜಿಲ್ಲೆ

ಕನಕ ಯುವ ಸೇನೆಗೆ ಕಲ್ಲಪ್ಪ ಅಧ್ಯಕ್ಷ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕರ್ನಾಟಕ ರಾಜ್ಯ ಕನಕ ಯುವ ಸೇನೆಯ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ತಾಲ್ಲೂಕಿನ ಬೆನಕನಳ್ಳಿ ಗ್ರಾಮದ ಯುವ ಮುಖಂಡ ಕಲ್ಪಪ್ಪ (ಕಲ್ಯಾಣರಾವ್) ಬೆನಕನಳ್ಳಿಕರ್ ಅವರನ್ನು ನೇಮಕ ಮಾಡಲಾಗಿದೆ.

ಸೇನೆಯ ರಾಜ್ಯ ಅಧ್ಯಕ್ಷ ಎಂ.ಎನ್. ವಿಜಯಕುಮಾರ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೂಡಲೇ ತಮ್ಮ ಜವಾಬ್ದಾರಿ ವಹಿಸಿಕೊಂಡು ಸೇನೆಯ ಸಂಘಟನೆ ಬಲವರ್ಧನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ.