ಬೀದರ್: ಮಕ್ಕಳು ಉನ್ನತ ಸಾಧನೆ ಮೂಲಕ ತಂದೆ-ತಾಯಿಗೆ ಕೀರ್ತಿ ತರಬೇಕು ಎಂದು ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಮಡಿವಾಳಪ್ಪ ಗಂಗಶೆಟ್ಟಿ ಸಲಹೆ ಮಾಡಿದರು.
ಚಿದಂಬರ ಶಿಕ್ಷಣ ಸಂಸ್ಥೆಯ ಸಂಚಾಲಿತ ಇಲ್ಲಿಯ ಸದ್ಗುರು ಸಿದ್ಧಾರೂಢ ಪದವಿ ಕಾಲೇಜಿನಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಹಾಗೂ ಬಿ.ಎ, ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಾಲಕರು ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಸಾಧ್ಯವಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಾರೆ. ಹೀಗಾಗಿ ಮಕ್ಕಳು ಅವರ ನಿರೀಕ್ಷೆ ಹುಸಿಗೊಳಿಸಬಾರದು ಎಂದು ಹೇಳಿದರು.
ಸಂಸ್ಥೆಯ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್‍ನಿಂದ ದೂರ ಇರಬೇಕು. ಓದನತ್ತ ಹೆಚ್ಚು ಗಮನ ಕೇಂದ್ರೀಕರಿಸಬೇಕು ಎಂದು ತಿಳಿಸಿದರು.
ಸಂಸ್ಥೆಯು ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಸಹ ನೀಡುತ್ತಿದೆ ಎಂದು ಹೇಳಿದರು.
ಶ್ರೀ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಸೂರ್ಯಕಾಂತ ಐನಾಪುರೆ, ಪದವಿ ಕಾಲೇಜು ಪ್ರಾಚಾರ್ಯ ನಾಗಪ್ಪ ಜಾನಕನೋರ ಮಾತನಾಡಿದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶ್ರೀ ಶಿವಕುಮಾರೇಶ ಗುರುಕುಲ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮ್ಯಾಗೇರಿ, ಉಪನ್ಯಾಸಕರಾದ ಈಶ್ವರ ರೆಡ್ಡಿ, ನಟರಾಜ, ನೆಹರೂ, ಡಾ. ಪಂಡಿತ ಗಂಗಶೆಟ್ಟಿ, ಬಸವರಾಜ ಬಿರಾದಾರ, ರಾಜಮ್ಮ ನೇಳಗೆ, ರಾಖಿ ಕಾಡಗೆ, ಮಂಗಲಾ, ಶ್ರೀಲತಾ, ಸಪ್ನಾ, ವಿಜಯಲಕ್ಷ್ಮಿ, ಅಂಬಿಕಾ, ಅರ್ಚನಾ, ಶ್ವೇತಾ, ಆಕಾಶ ಇದ್ದರು.
ಸ್ವಾತಿ, ಭಾಗ್ಯಶ್ರೀ, ಶಿವಾನಿ ನಿರೂಪಿಸಿದರು. ದೀಪಿಕಾ ಸ್ವಾಗತಿಸಿದರು. ಗಂಗೋತ್ರಿ ವಂದಿಸಿದರು.