ಜಿಲ್ಲೆ

ಕರ್ನಾಟಕ ಕಾಲೇಜು ವಿದ್ಯಾರ್ಥಿಗಳು ವಿಭಾಗಮಟ್ಟಕ್ಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಇಲ್ಲಿಯ ಕರ್ನಾಟಕ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಸಾಂಸ್ಕೃತಿಕ ಪಠ್ಯೇತರ ಚಟುವಟಿಕೆ ಸ್ಪರ್ಧೆಯ ವಿವಿಧ ಸ್ಪರ್ಧೆಗಳಲ್ಲಿ ವಿಭಾಗಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ನಗರದಲ್ಲಿ ಈಚೆಗೆ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಪಠ್ಯೇತರ ಚಟುವಟಿಕೆ ಸ್ಪರ್ಧೆಯ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಅರ್ಹತೆ ಗಳಿಸಿದರು.

ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಲಕ್ಷ್ಮಿ ಜವಾಹರ್ (ಪ್ರಥಮ), ಆಶು ಭಾಷಣದಲ್ಲಿ ನಾಗೇಶ ರಾಚಪ್ಪ (ಪ್ರಥಮ), ರಸಪ್ರಶ್ನೆಯಲ್ಲಿ ಕಿರಣಕುಮಾರ, ಮಾಯಾದೇವಿ (ದ್ವಿತೀಯ), ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಮೋನಿಕಾ ನಾರಾಯಣ (ತೃತೀಯ), ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ರುತುಜ ನಂದಕುಮಾರ (ತೃತೀಯ) ಬಹುಮಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ಬಿ.ಜಿ. ಶೆಟಕಾರ್, ಕಾರ್ಯದರ್ಶಿ ಸತೀಶ್ ಪಾಟೀಲ, ಜಂಟಿ ಕಾರ್ಯದರ್ಶಿ ಶಿವಾನಂದ ಗಾದಗೆ, ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರ, ವಿದ್ಯಾರ್ಥಿ ಕ್ಷೇಮಾಧಿಕಾರಿ ನೀಲೇಶ್ ರತ್ನಾಕರ್ ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.