ಬೀದರ್: ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ)ಯ ಜಿಲ್ಲಾ ಘಟಕದ ವತಿಯಿಂದ ಇಲ್ಲಿನ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಗುರುವಾರ ನಡೆದ 69ನೇ ವರ್ಷದ ಕರ್ನಾಟಕ ಸಂಭ್ರಮದಲ್ಲಿ ಸಾಮಾಜಿಕ ಸೇವೆಗಾಗಿ ನಾಗೋರಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಬಿ. ಜಾನಕನೋರ, ಲೋಕೇಶ ಮೇತ್ರೆ ಹಾಗೂ ಬಜರಂಗ ಕಾಶೆಂಪುರ ಅವರಿಗೆ ಜಿಲ್ಲಾಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.