ಜಿಲ್ಲೆ

ಸಂವಿಧಾನ ದಿನ: 40 ಜನರಿಂದ ರಕ್ತದಾನ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಬುದ್ಧ, ಬಸವ, ಭೀಮ ಎಜುಕೇಷನ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಂವಿಧಾನ ದಿನದ ಅಂಗವಾಗಿ ಇಲ್ಲಿಯ ಅಂಬೇಡ್ಕರ್ ವೃತ್ತದ ಸಮೀಪ ಮಂಗಳವಾರ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ 40 ಮಂದಿ ರಕ್ತದಾನ ಮಾಡಿದರು.

ರಕ್ತದಾನಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಶಿಬಿರವನ್ನು ಉದ್ಘಾಟಿಸಿದರು. ಬುದ್ಧ, ಬಸವ, ಭೀಮ ಎಜುಕೇಷನ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿನೋದಕುಮಾರ ಅಪ್ಪೆ ಅಧ್ಯಕ್ಷತೆ ವಹಿಸಿದ್ದರು.

ಮುಖಂಡರಾದ ಅಬ್ದುಲ್ ಮನ್ನಾನ್ ಸೇಠ್, ರಮೇಶ ಡಾಕುಳಗಿ, ಬಾಬುರಾವ್ ಪಾಸ್ವಾನ್, ಬಸವರಾಜ ಮಾಳಗೆ, ಸೂರ್ಯಕಾಂತ ಸಾಧುರೆ, ಚಂದ್ರಕಾಂತ ನಿರಾಟೆ, ಅಂಬಾದಾಸ ಗಾಯಕವಾಡ್, ಅರುಣ ಪಟೇಲ್, ವಿಶಾಲ್ ಅಪ್ಪೆ, ಕುಪೇಂದ್ರ, ಅಪೆಕ್ಸ್ ಬ್ಲಡ್ ಬ್ಯಾಂಕ್ ಸಿಬ್ಬಂದಿ ಇದ್ದರು.