ಜಿಲ್ಲೆ

ಯೋಗ ಶಿಕ್ಷಕರ ತರಬೇತಿ ಶಿಬಿರ ಡಿ.3ರಿಂದ

ರೇವಣಸಿದ್ದಪ್ಪ ಪಾಟೀಲ್

ಬೀದರ್: ನಗರದಲ್ಲಿ ಡಿ.13ರಿಂದ 18 ರವರೆಗೆ ಯೋಗ ಶಿಕ್ಷಕರ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷ ಯೋಗೇಂದ್ರ ಯದಲಾಪುರೆ ತಿಳಿಸಿದ್ದಾರೆ.

ಪ್ರತಿ ನಿತ್ಯ ಬೆಳಗ್ಗೆ 5.30ರಿಂದ ಶಿಬಿರ ನಡೆಯಲಿದ್ದು, ಹಿರಿಯ ಯೋಗ ಸಾಧಕರಿಂದ ತರಬೇತಿ ನೀಡಲಾಗುವುದು. ಕೊನೆಗೆ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಯೋಗ ಶಿಕ್ಷಕರಾಗಲು ಆಸಕ್ತರು ಶಿಬಿರದಲ್ಲಿ ಭಾಗವಹಿಸಲು ಹೆಸರು ನೋಂದಣಿ ಮಾಡಬೇಕು. ಮಹಿಳೆಯರು, ಪುರುಷರಿಗೆ ಸಮಾನ ಅವಕಾಶವಿದೆ. ವಯಸ್ಸಿನ ಯಾವುದೇ ನಿರ್ಬಂಧವಿಲ್ಲ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ತರಬೇತಿ ನೀಡಲಾಗುವುದು. ಹೆಸರು ನೋಂದಣಿ ಹಾಗೂ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7019071385ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.