ಬೀದರ್: ನವದೆಹಲಿಯ ಕಾನ್ಫೆಡರೇಷನ್ ಆಫ್ ಸೆಂಟ್ರಲ್ ಗವರ್ನಮೆಂಟ್ ಎಂಪ್ಲಾಯೀಸ್ ಆ್ಯಂಡ್ ವರ್ಕ್‍ಸ್‍ನ ಮಹಿಳಾ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ಇಲ್ಲಿಯ ಪ್ರಧಾನ ಅಂಚೆ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಗಲಾ ಭಾಗವತ್ ಆಯ್ಕೆಯಾಗಿದ್ದಾರೆ.
ಆಂಧ್ರಪ್ರದೇಶದ ವಿಜಯವಾಡದಲ್ಲಿ ಈಚೆಗೆ ನಡೆದ ಕೇಂದ್ರ ಸರ್ಕಾರದ ಮಹಿಳಾ ನೌಕರರ ರಾಷ್ಟ್ರಮಟ್ಟದ ಸಮಾವೇಶದಲ್ಲಿ ಅವರು ಅವಿರೋಧವಾಗಿ ಆಯ್ಕೆಯಾದರು.
ಸಮಿತಿಯು ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಮಹಿಳಾ ನೌಕರರ ಹಿತರಕ್ಷಣೆಗೆ ಶ್ರಮಿಸಲಿದೆ ಎಂದು ಮಂಗಲಾ ಭಾಗವತ್ ತಿಳಿಸಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡಲು ಅವಕಾಶ ದೊರೆತಿರುವುದು ಸಂತಸ ಉಂಟು ಮಾಡಿದೆ. ಹುದ್ದೆಗೆ ನ್ಯಾಯ ದೊರಕಿಸಿಕೊಡಲು ಎಲ್ಲ ಪ್ರಯತ್ನ ಮಾಡುವೆ ಎಂದು ಹೇಳಿದ್ದಾರೆ.