ಬೀದರ್: ಪ್ರಯಾಣಿಕರಿಗೆ ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಸಂಬಂಧ ಡಿ.2 ರಂದು ಸೋಮವಾರ ಮಧ್ಯಾಹ್ನ 3.30ರಿಂದ ಸಂಜೆ 5.30 ರವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ್ ತಿಳಿಸಿದ್ದಾರೆ.
ಮೊಬೈಲ್ ಸಂಖ್ಯೆ 7760992200, 7760992202ಗೆ ಕರೆ ಮಾಡಿ ಸಮಸ್ಯೆಗಳನ್ನು ಹೇಳಬಹುದು ಎಂದು ತಿಳಿಸಿದ್ದಾರೆ.