ಬೀದರ್: ವಿಶ್ವಗುರು ಬಸವಣ್ಣನವರ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅತ್ಯಂತ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಲಾಗುವುದು ಎಂದು ಲಿಂಗಾಯತ ಸಮಾಜ ಯುವ ಒಕ್ಕೂಟ ರಾಜ್ಯಾಧ್ಯಕ್ಷ ಆನಂದ ದೇವಪ್ಪ ತಿಳಿಸಿದ್ದಾರೆ.
ಯತ್ನಾಳ್ ಅವರು ಮಾನಸಿಕ ಅಸಮತೋಲ ಕಳೆದುಕೊಂಡಿದ್ದಾರೆ. ಮಹಾತ್ಮರ ಕುರಿತು ಅವಮಾನಕರವಾಗಿ ಹೇಳಿಕೆ ನೀಡಿದ್ದು ಸರಿಯಲ್ಲ. ಕೂಡಲೇ ಯತ್ನಾಳ್ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ಬಸವ ಅನುಯಾಯಿಗಳು ಹೋರಾಟ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.