ಜಿಲ್ಲೆ

ಪ್ರವೇಶ ನಿಷೇಧಕ್ಕೆ ಕಿಡಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಹಿಂದು ಜಾಗೃತಿ ಸಮಾವೇಶಕ್ಕೆ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಪ್ರಮೋದ್ ಮುತಾಲಿಕ್, ಮಾಧವಿ ಲತಾ ಹಾಗೂ ಕಾಜಲ್ ಹಿಂದುಸ್ತಾನಿ ಅವರನ್ನು ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಜಿಲ್ಲಾಡಳಿತ ಹಾಗೂ ಸರ್ಕಾರದ ಕ್ರಮಕ್ಕೆ ಬಿಜೆಪಿ ನಗರ ಘಟಕ ಅಧ್ಯಕ್ಷ ಶಶಿಧರ ಹೊಸಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಹಿಂದುಗಳಿಗೆ ನೆಮ್ಮದಿ ಇಲ್ಲದಂತಾಗಿದೆ. ಅಭಿವೃದ್ಧಿಯಂತೂ ಶೂನ್ಯ. ಜನರ ನೆಮ್ಮದಿ ಸಹ ಹಾಳು ಮಾಡಲು ಹೊರಟಿದೆ ಎಂದು ಪ್ರಕಟಣೆಯಲ್ಲಿ ಕಿಡಿಕಾರಿದ್ದಾರೆ.