ಜಿಲ್ಲೆ

ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಕಾಂಗ್ರೆಸ್ ಕಿಸಾನ್, ಖೇತ್ ಮಜ್ದೂರ್ ವಿಭಾಗದ ರಾಷ್ಟ್ರೀಯ ಸಂಯೋಜಕ ಪ್ರಕಾಶ ಘಾಳೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶಾಸಕ, ಸಚಿವ, ಮುಖ್ಯಮಂತ್ರಿ, ವಿಧಾನಸಭಾಧ್ಯಕ್ಷ, ರಾಜ್ಯಸಭೆ ಸದಸ್ಯ, ಕೇಂದ್ರ ಸಚಿವ, ರಾಜ್ಯಪಾಲರಾಗಿ ಅವರು ರಾಜ್ಯ ಹಾಗೂ ದೇಶದ ಪ್ರಗತಿಗೆ ನೀಡಿದ ಕೊಡುಗೆ ಅಪಾರ ಎಂದು ಹೇಳಿದ್ದಾರೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಅವರು, ಸ್ನೇಹ ಜೀವಿಯಾಗಿದ್ದರು. ಅವರನ್ನು ಭೇಟಿಯಾದಾಗಲೆಲ್ಲ ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಮಾರ್ಗದರ್ಶನ ಮಾಡುತ್ತಿದ್ದರು. ಬೀದರ್‍ನ ಅನೇಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು ಎಂದು ಸ್ಮರಿಸಿದ್ದಾರೆ.

ದೇವರು ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ಹಾಗೂ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.