ಜಿಲ್ಲೆ

ವಚನ ವಿಶ್ವವಿದ್ಯಾಲಯ ಸ್ಥಾಪಿಸಿ

ರೇವಣಸಿದ್ದಪ್ಪ ಪಾಟೀಲ್

ಬಸವಕಲ್ಯಾಣ: ಬಸವಾದಿ ಶರಣರ ಕರ್ಮಭೂಮಿ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂದು ಖೇಳಗಿಯ ಶ್ರೀ ಶಿವಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಶಿವಲಿಂಗ ಸ್ವಾಮೀಜಿ ಒತ್ತಾಯಿಸಿದ್ದಾರೆ.

ನೂತನ ಅನುಭವ ಮಂಟಪ ಕಾಮಗಾರಿ ಪ್ರಗತಿಯಲ್ಲಿದೆ. ಇದರ ಜತೆಯಲ್ಲಿ ವಚನ ವಿವಿ ಸ್ಥಾಪಿಸುವುದು ತೀರಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕಾಯಕ, ದಾಸೋಹ, ಸಮಾನತೆ ತತ್ವಗಳನ್ನು ಶರಣರು ನೀಡಿದ್ದಾರೆ. ಜಗತ್ತಿಗೆ ಅನುಭವ ಮಂಟಪ ಮೂಲಕ ಪ್ರಜಾಪ್ರಭುತ್ವವನ್ನು ಪರಿಚಯಿಸಿದ್ದು ಬಸವಣ್ಣ. 12ನೇ ಶತಮಾನದಲ್ಲೇ ಸಮಪಾಲು-ಸಮಬಾಳು ಸಾರಿದ್ದಾರೆ. ಹೀಗಾಗಿ ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಸ್ವಾಗತಾರ್ಹ. ಈ ಭಾಗದ ಬಹುದಿನಗಳ ಬೇಡಿಕೆಯಾದ ವಚನ ವಿವಿ ಸ್ಥಾಪನೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.