ಜಿಲ್ಲೆ

ಮರಕಲ್ ಗ್ರಾಪಂ ಅಧ್ಯಕ್ಷೆಗೆ ಗೌರವ ಡಾಕ್ಟರೇಟ್

ರೇವಣಸಿದ್ದಪ್ಪ ಪಾಟೀಲ್

ಬೀದರ್: ಸಾಮಾಜಿಕ ಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳಿಗಾಗಿ ತಾಲ್ಲೂಕಿನ ಮರಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಈಶ್ವರಮ್ಮ ಬಸವರಾಜ ಓಂಕಾರೆ ಅವರಿಗೆ ಮೆಕ್ಸಿಕೊದ ತೊಲೊಸಾ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದೆ.

ಕಲಬುರಗಿಯಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಈಶ್ವರಮ್ಮ ಅವರಿಗೆ ಗೌರವ ಡಾಕ್ಟರೇಟ್ ದೊರೆತಿದ್ದಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ ಜಾಬಾ, ಸದಸ್ಯರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ.