ಜಿಲ್ಲೆ

ನೌಕರರ ಸಂಘ: ಕಪಲಾಪುರೆ ಕಾರ್ಯಾಧ್ಯಕ್ಷ

ರೇವಣಸಿದ್ದಪ್ಪ ಪಾಟೀಲ್

ಬೀದರ್: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಸೂರ್ಯಕಾಂತ ಎ. ಬಿರಾದಾರ ಹಾಗೂ ಕಾರ್ಯಾಧ್ಯಕ್ಷರಾಗಿ ಶಿವರಾಜ ಕಪಲಾಪುರೆ ಅವರನ್ನು ನೇಮಕ ಮಾಡಲಾಗಿದೆ.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸೂರ್ಯಕಾಂತ ಬಿರಾದಾರ ಕೃಷಿ ಇಲಾಖೆಯ ಉಪ ನಿರ್ದೇಶಕರಾಗಿದ್ದರೆ, ಶಿವರಾಜ ಕಪಲಾಪುರೆ ಸಿರ್ಸಿ(ಎ) ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಿರಿಯ ಮುಖ್ಯಶಿಕ್ಷಕರಾಗಿದ್ದಾರೆ. ನೌಕರರ ವಿವಿಧ ಸಂಘ ಸಂಸ್ಥೆಗಳೊಂದಿಗೆ ಒಡನಾಟ ಹೊಂದಿದ್ದಾರೆ. ಬಿರಾದಾರ ಹಾಗೂ ಕಪಲಾಪುರೆ ಅವರ ನೇಮಕಕ್ಕೆ ಅನೇಕ ನೌಕರರು ಸಂತಸ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ.