ಬೀದರ್: ಬಿಜೆಪಿ ರಾಜ್ಯದಲ್ಲಿ ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಕೆ. ಸಂಜುಕುಮಾರ ಆರೋಪಿಸಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ಪಾತ್ರವಿಲ್ಲದಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತೇಜೋವಧಗೆ ಪ್ರಯತ್ನಿಸುತ್ತಿರುವುದೇ ಇದಕ್ಕೆ ತಾಜಾ ನಿದರ್ಶನ ಎಂದು ಹೇಳಿದ್ದಾರೆ.
ಉತ್ತಮ ಕೆಲಸಗಳಿಂದಾಗಿ ರಾಜ್ಯದಲ್ಲಿ ಪ್ರಿಯಾಂಕ್ ಖರ್ಗೆ ವರ್ಚಸ್ಸು ದಿನೇ ದಿನೇ ಹೆಚ್ಚುತ್ತಿರುವುದು ಬಿಜೆಪಿಯವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಏನಾದರೂ ಮಾಡಿ ಅವರ ಬೆಳವಣಿಗೆಗೆ ತಡೆಯೊಡ್ಡಬೇಕೆಂದು ಒಂದಿಲ್ಲೊಂದು ಕುತಂತ್ರ ಮಾಡುತ್ತಲೇ ಇದ್ದಾರೆ ಎಂದು ಟೀಕಿಸಿದ್ದಾರೆ.
ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆ ಅವರಿಗೂ ಸಂಬಂಧವೇ ಇಲ್ಲ. ಹೀಗಿರುವಾಗ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅವರ ರಾಜೀನಾಮೆಗಾಗಿ ಒತ್ತಾಯಿಸುತ್ತಿರುವುದು ಹಾಸ್ಯಾಸ್ಪದ. ಅನಗತ್ಯವಾಗಿ ಖರ್ಗೆ ಕುಟುಂಬದ ವಿರೋಧ ಮಾಡುವುದನ್ನು ಬಿಜೆಪಿಯವರು ನಿಲ್ಲಿಸಬೇಕು ಎಂದು ಹೇಳಿದ್ದಾರೆ.