ಜಿಲ್ಲೆ

ದಲಿತ ನಾಯಕರನ್ನು ಮುಗಿಸುವುದು ಬಿಜೆಪಿ ಅಜೆಂಡಾ

ರೇವಣಸಿದ್ದಪ್ಪ ಪಾಟೀಲ್

ಬೀದರ್: ದಲಿತ ನಾಯಕರನ್ನು ಮುಗಿಸುವುದೇ ಬಿಜೆಪಿ ಹಾಗೂ ಆರ್‍ಎಸ್‍ಎಸ್ ಅಜೆಂಡಾ ಆಗಿದೆ ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ವಕ್ತಾರ ಶಂಕರ ಜ್ಯಾಂತಿಕರ್ ಆರೋಪಿಸಿದ್ದಾರೆ.

ಬಿಜೆಪಿಯವರು ದಲಿತ ನಾಯಕರ ವಿರುದ್ಧ ಕುತಂತ್ರ ನಡೆಸುತ್ತಿದ್ದಾರೆ. ವಿನಾಕಾರಣ ದಲಿತ ಸಚಿವರನ್ನು ಗುರಿ ಮಾಡುತ್ತಿದ್ದಾರೆ. ಇದಕ್ಕೆ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿರುವುದೇ ಉದಾಹರಣೆ ಎಂದು ಹೇಳಿದ್ದಾರೆ.

ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ದಲಿತ ನಾಯಕರು ಹೆದರುವುದಿಲ್ಲ. ರಾಜಕೀಯ ಬಿಟ್ಟು ಹೋಗುವುದಿಲ್ಲ. ದಲಿತ ಸಮುದಾಯವನ್ನು ಎದುರು ಹಾಕಿಕೊಂಡರೆ ಬಿಜೆಪಿ ಮುಂದಿನ ದಿನಗಳಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.