ಜಿಲ್ಲೆ

ಅಖಿಲ ಭಾರತೀಯ ಸಾಹಿತ್ಯ ಪರಿಷತ್‍ಗೆ ಸ್ವಾಮಿ ನೇಮಕ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಬೀದರ್ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ನಾಗೇಶ ಸ್ವಾಮಿ ಮಸ್ಕಲ್ ಅವರನ್ನು ನೇಮಕ ಮಾಡಲಾಗಿದೆ.

ಪರಿಷತ್ ರಾಜ್ಯ ಅಧ್ಯಕ್ಷರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ತಿಳಿಸಿದ್ದಾರೆ.

ಔರಾದ್ ತಾಲ್ಲೂಕಿನ ಮಸ್ಕಲ್ ಗ್ರಾಮದ ನಾಗೇಶ ಸ್ವಾಮಿ ಯುವ ಬರಹಗಾರ, ವಿಮರ್ಷಕ, ಸಂಶೋಧಕರಾಗಿದ್ದಾರೆ. ತಮ್ಮ ಅಧ್ಯಕ್ಷತೆಯ ಸ್ಪರ್ಧಾ ಸಂಕಲ್ಪ ಅಕಾಡೆಮಿ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.