ಬೀದರ್: ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಹತ್ತಿರದ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನು ವಿರೂಪಗೊಳಿಸಿದ್ದಕ್ಕೆ ಲಿಂಗಾಯತ ಸಮಾಜ ಯುವ ಒಕ್ಕೂಟ ರಾಜ್ಯಾಧ್ಯಕ್ಷ ಆನಂದ ದೇವಪ್ಪ ಖಂಡಿಸಿದ್ದಾರೆ.
ರಾತ್ರಿ ಹೊತ್ತಲ್ಲಿ ಕೆಲವು ಕಿಡಿಗೇಡಿಗಳು ಬಸವಣ್ಣನವರ ಮೂರ್ತಿಯ ಕೈಗೆ ಹಾನಿ ಮಾಡಿ, ಧ್ವಜ ಕಿತ್ತು ಹಾಕಿದ್ದಾರೆ. ಪೊಲೀಸರು ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಬಸವಣ್ಣ ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತರಲ್ಲ. ಅವರು ಇಡೀ ನಾಡಿಗೆ ಗುರು. ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಣೆ ಮಾಡಲಾಗಿದೆ. ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಬಂಧಿಸಬೇಕು. ನಿರ್ಲಕ್ಷ್ಯ ಮಾಡಿದರೆ ಹೋರಾಟ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.