ಜಿಲ್ಲೆ

ಬೆಂಗಳೂರಿನಲ್ಲಿ ಹೋರಾಟ 23ಕ್ಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಬೆಳಗ್ಗೆ 10.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ (ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ.

ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಆಸಕ್ತರು ಬುಧವಾರ ಸಂಜೆ 5ಕ್ಕೆ ನಗರದ ರೈಲು ನಿಲ್ದಾಣಕ್ಕೆ ಆಗಮಿಸಬೇಕು ಎಂದು ಹೇಳಿದ್ದಾರೆ.