ಬೀದರ್: ನಗರದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಗುಂಡೇಟಿಗೆ ಗಾಯಗೊಂಡು ಹೈದರಾದಬಾದ್ನಲ್ಲಿ ಚಿಕಿತ್ಸೆ ಪಡೆದು ಮನೆಗೆ ಆಗಮಿಸಿದ ಶಿವಕುಮಾರ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಇಲ್ಲಿನ ಲಾಡಗೇರಿಲ್ಲಿನ ಮನೆಗೆ ಭೇಟಿ ನೀಡಿದ ಸಚಿವರು, ಸರ್ಕಾರ ಹಾಗೂ ನಾನು ನಿಮ್ಮ ಜತೆಗೆ ಇದ್ದೇವೆ. ಆಸ್ಪತ್ರೆಯ ಚಿಕಿತ್ಸೆ ವೆಚ್ಚವನ್ನು ಭರಿಸಲಾಗಿದೆ. ಆರೋಗ್ಯ ಸುಧಾರಿಸಿದ ಮೇಲೆ ಯಾವುದಾದರೊಂದು ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ.ಗಿರೀಶ್ ಬದೋಲೆ, ಎಸ್ಪಿ ಪ್ರದೀಪ್ ಗುಂಟಿ, ನಗರಸಭೆ ಮಾಜಿ ಸದಸ್ಯ ಧನರಾಜ ಹಂಗರಗಿ, ಸುರೇಶ ಚನ್ನಶೆಟ್ಟಿ ಇತರರಿದ್ದರು.