ಜಿಲ್ಲೆ

ವಿಚಾರ ಸಂಕಿರಣ

ರೇವಣಸಿದ್ದಪ್ಪ ಪಾಟೀಲ್

ಬೀದರ್: ರೆವರೆಂಡ್ ಡಾ. ಜೆ.ಟಿ. ಸಿಮಂಡ್ಸ್ ಕನ್ನಡ ಸಾಹಿತ್ಯ ಸಂಘದ ವತಿಯಿಂದ ನಗರದ ಮಂಗಲಪೇಟ್‍ನ ಚರ್ಚ್‍ನಲ್ಲಿ ಫೆ. 28 ರಂದು ಸಂಜೆ 5.30ಕ್ಕೆ ಜೆ.ಎಫ್. ಫ್ಲೀಟ್ ಅವರ ಕನ್ನಡ ಸಾಹಿತ್ಯ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್ ಜಿಲ್ಲಾ ಮೇಲ್ವಿಚಾರಕ ನೆಲ್ಸನ್ ಸುಮಿತ್ರಾ ಸಾನಿಧ್ಯ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಉದ್ಘಾಟಿಸುವರು. ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ ಡಾ. ರಾಜಕುಮಾರ ಅಲ್ಲೂರೆ ವಿಶೇಷ ಉಪನ್ಯಾಸ ನೀಡುವರು. ರೆ. ಡಾ. ಜೆ.ಟಿ. ಸೀಮಂಡ್ಸ್ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಬಿ.ಕೆ. ಸುಂದರರಾಜ್ ಅಧ್ಯಕ್ಷತೆ ವಹಿಸುವರು.

ಸಹ ಪ್ರಾಧ್ಯಾಪಕರಾದ ಡಾ. ಮನೋಹರ ಮೇತ್ರೆ, ಡಾ. ಜೈಭಾರತ ಮಂಗೇಶ್ಕರ್, ಡಾ. ಜೈಶೀಲಾ, ಡಾ. ಸಂಜೀವಕುಮಾರ ಕೋಹಿನೂರ, ಸಹಾಯಕ ಪ್ರಾಧ್ಯಾಪಕಿ ಪ್ರೊ. ಮಮತಾ ಅವರನ್ನು ಸನ್ಮಾನಿಸಲಾಗುವುದು. ಸಂಘದ ಕಾರ್ಯದರ್ಶಿ ಡಾ. ಧನರಾಜ ತುಡಮೆ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ಪ್ರಕಟಣೆ ತಿಳಿಸಿದೆ.