ಜಿಲ್ಲೆ

ಪೂರ್ವಭಾವಿ ಸಭೆ ಮಾ. 2 ರಂದು

ರೇವಣಸಿದ್ದಪ್ಪ ಪಾಟೀಲ್

ಬೀದರ್: ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಸಮಿತಿ ವತಿಯಿಂದ ಇಲ್ಲಿಯ ಪಾಪನಾಶ ಮಂದಿರದಲ್ಲಿ ಮಾ. 2 ರಂದು ಬೆಳಿಗ್ಗೆ 11.30ಕ್ಕೆ ಪೂರ್ವಭಾವಿ ಸಿದ್ಧತಾ ಸಭೆ ಕರೆಯಲಾಗಿದೆ.

ನಗರದಲ್ಲಿ ಫೆಬ್ರುವರಿ 12 ರಂದು ರೇಣುಕಾಚಾರ್ಯರ ಜಯಂತಿಯನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಸರ್ವ ಸಮಾಜಗಳ ಪ್ರಮುಖರು ಸಭೆಗೆ ಹಾಜರಾಗಿ, ಜಯಂತಿ ಆಚರಣೆ ಸಂಬಂಧ ತಮ್ಮ ಸಲಹೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ವೈಜಿನಾಥ ಕಮಠಾಣೆ, ಕಲ್ಯಾಣ ಕರ್ನಾಟಕ ಜಂಗಮ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಯ್ಯ ಸ್ವಾಮಿ ಹಾಗೂ ಮುಖಂಡ ವರದಯ್ಯ ಸ್ವಾಮಿ ಮನವಿ ಮಾಡಿದ್ದಾರೆ.